ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಬಳ್ಳಾರಿ ಜಿಲ್ಲೆಯ ಕೈಗಾರಿಕೆಗಳ ಭೂಸ್ವಾಧೀನ ಸಮಸ್ಯೆಯ ಕುರಿತು ನಡೆದ ಮಹತ್ವದ ಸಭೆಯಲ್ಲಿ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಪಾಲ್ಗೊಂಡಿದ್ದರು.
ಸವಿವರವಾದ ಚರ್ಚೆಯ ನಂತರ, ರೈತರಿಗೆ ನ್ಯಾಯಸಮ್ಮತ ಪರಿಹಾರ ಒದಗಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.
ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂಸದ ಇ. ತುಕಾರಾಂ, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

