ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ. ಹಾಗಾಗಿ ಕರ್ನಾಟಕ ರಾಜ್ಯದಲ್ಲಿ ಮೂರನೇ ಶಕ್ತಿ ಉದಯಕ್ಕೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಬಸ್ ಸ್ಟ್ಯಾಂಡ್ನಲ್ಲಿಜೆಡಿಎಸ್ನವರು ಕುಳಿತಿದ್ದಾರೆ. ಜೆಡಿಎಸ್ನವರಿಗೆ ಬಸ್ ಇಲ್ಲ, ಏನೂ ಇಲ್ಲ ಎಂದು ಅವರು ಆರೋಪಿಸಿದರು.
ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ್ದು, ನನ್ನ ಮನಸ್ಸಿನಲ್ಲಿನಿಶ್ಚಳವಾಗಿದ್ದೇನೆ. ಜನರ ಹಿತ ಮುಖ್ಯ ಎಂದು ತಿಳಿಸಿದ್ದಾರೆ.