ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲೆಯ ತಿಪಟೂರಿನ ಸರ್ಕಾರಿ ಬಸ್ ನಿಲ್ದಾಣದ ಬಳಿಯಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಕಳಪೆ ಗುಣಮಟ್ಟದ ಊಟ, ತಿಂಡಿಯನ್ನು ಪೂರೈಕೆ ಮಾಡಲಾಗುತ್ತಿದ್ದು, ಸ್ವಚ್ಛತೆಯೇ ಮರಿಚೀಕೆಯಾಗಿದೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ನೀಡಿ, ಅದರಂತೆ, ಸದರಿ ನಗರಸಭೆಯ ಇಂದಿರಾ ಕ್ಯಾಂಟೀನ್ ಅನ್ನು ಪ್ರತಿದಿನ ಪರಿಶೀಲನೆ ಮಾಡಲಾಗುತ್ತಿದ್ದು, ಕ್ಯಾಂಟೀನ್ ಆವರಣ, ಶೌಚಾಲಯದ ಸ್ವಚ್ಛತೆಯನ್ನು ಮಾಡಲು ನಗರಸಭೆಯ ಪೌರ ಕಾರ್ಮಿಕರನ್ನು ಈಗಾಗಲೇ ನೇಮಕ ಮಾಡಲಾಗಿರುತ್ತದೆ. ಮುಂದುವರೆದು ಗುಣಮಟ್ಟದ ಊಟ-ಉಪಹಾರಗಳನ್ನು ನೀಡಲಾಗುತ್ತಿದ್ದು, ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಇನ್ನು ಮುಂದೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮವಹಿಸಲಾಗುವುದು ಎಂದು ತಿಪಟೂರು ನಗರಸಭೆಯ ಪೌರಾಯುಕ್ತರರು ತಿಳಿಸಿದ್ದಾರೆ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್ʼ ಖಾತೆಗೆ ಟ್ಯಾಗ್ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.