ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪತ್ರಕರ್ತರು ಸುಳ್ಳು ಹೇಳುವುದಿಲ್ಲ ಎನ್ನುವ ನಂಬಿಕೆ ಈಗಲೂ ಇದೆ. ಆದರೆ, ಊಹಾ ಪತ್ರಿಕೋದ್ಯಮ ವಿಪರೀತ ಆಗುತ್ತಿದೆ. ಇವತ್ತಿನ ಪತ್ರಕರ್ತರು ಮೌಢ್ಯದ ವಿರುದ್ಧ ಜನರನ್ನು ಎಚ್ಚರಿಸುವ ಕೆಲಸವನ್ನೇ ಮಾಡುತ್ತಿಲ್ಲ ಎನ್ನುವುದು ಬೇಸರದ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಒಂದು ಫೋಟೋ ಸಾವಿರ ಪದಗಳಿಗೆ ಸಮ. ಹೀಗಾಗಿ ಫೋಟೋ ಜರ್ನಲಿಸ್ಟ್ ಗಳು ಪತ್ರಿಕಾ ವೃತ್ತಿಯ ಮುಖ್ಯ ಭಾಗ. ಆದರೆ ತೆಗೆದ ಫೋಟೋಗಳನ್ನು ಬೇರೆ ಸಂದರ್ಭಗಳಲ್ಲಿ ಬಳಸಿ ತಿರುಚಿದ ಅಭಿಪ್ರಾಯ ಮೂಡಿಸುವುದು ಆರೋಗ್ಯಕರವಲ್ಲ.
ಸೆನ್ಸೇಷನ್ ಸುದ್ದಿಗಳಿಂದ ಸಮಾಜಕ್ಕೆ ಏನು ಪ್ರಯೋಜನ ಎನ್ನುವುದನ್ನು ಪತ್ರಕರ್ತರು ಯೋಚಿಸಬೇಕು. ಸಮಾಜಕ್ಕೆ ಉಪಯೋಗ ಇಲ್ಲದ್ದನ್ನು ಏಕೆ ಸುದ್ದಿ ಮಾಡಬೇಕು? ಎನ್ನುವ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

