ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ-ಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ಕೊಡಬಾರದು ಎಂದು ಪ್ರತಾಪ್ ಸಿಂಹ ಅವರು ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.  ನ್ಯಾಯಾಲಯದಲ್ಲಿ ವಿಷಯ ಇತ್ಯರ್ಥವಾಗಲಿ. ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ.

ಸಾಂಸ್ಕೃತಿಕವಾಗಿ ಎಲ್ಲ ಧರ್ಮದ ಜನರು ಇದರಲ್ಲಿ ಭಾಗವಹಿಸುತ್ತಾರೆ. ದಸರಾ ನಾಡಹಬ್ಬವಾಗಿದ್ದು, ಒಂದು ಧರ್ಮದವರು ಮಾತ್ರ ಭಾಗವಹಿಸಬೇಕು ಎಂದೇನೂ ಇಲ್ಲ.

- Advertisement - 

ಸಾರ್ವತ್ರಿಕ ಹಬ್ಬದಲ್ಲಿ ಎಲ್ಲ ಜಾತಿ ಮತ್ತು ಧರ್ಮದವರು ಭಾಗವಹಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಸಮಾಜದ ಶಾಂತಿಭಂಗ ಮಾಡುವ ಕೆಲಸ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

- Advertisement - 

 

 

 

Share This Article
error: Content is protected !!
";