ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಿ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್ ಬೆಂಗಳೂರು CM ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದರು.

ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ತಿಳಿಸಿದರು.

ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು ಎಂದು ತಿಳಿಸಿದರು.

ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.

Share This Article
error: Content is protected !!
";