ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಒಕ್ಕೂಟದೊಂದಿದೆ ವಿಧಾನಸೌಧದಲ್ಲಿ ಸುದೀರ್ಘ ಸಭೆ ನಡೆಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

