ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ಆ.28ರಂದು ನಡೆಯಲಿರುವ ರಾಜ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಪತ್ರಿಕಾ ಅಸಂಘಟಿತ ಕಾರ್ಮಿಕ ವಲಯದ ಅಡಿಯಲ್ಲಿ ವಿತರಕರಿಗೆ ಅಪಘಾತ ಪರಿಹಾರ ವಿಮೆ ಯೋಜನೆಯ ಜಾರಿಗೆ ತಂದಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು.

- Advertisement - 

ಪತ್ರಿಕಾ ವಿತರಕರಿಗೆ ಪ್ರಪ್ರಥಮ ಬಾರಿಗೆ ನೀಡಿರುವ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿ ಅಭಿನಂದನೆ ತಿಳಿಸಲಾಯಿತು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು,

- Advertisement - 

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ, ಮೈಸೂರು ಜಿಲ್ಲಾ ಅಧ್ಯಕ್ಷ ಹೋಮದೇವ ಜೆ.ಎಸ್., ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಿಕಾ ವಿತರಕ ಜವರಪ್ಪ, ಪತ್ರಿಕಾ ವಿತರಕರಾದ ಶ್ರೀಕಾಂತ್, ನಾಗೇಶ್, ರಾಜಶೇಖರ್ ಮತ್ತಿತರರು ಇದ್ದರು.

Share This Article
error: Content is protected !!
";