ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯಾದ್ಯಂತ ನಡೆಯುತ್ತಿರುವ ಪೌರಕಾರ್ಮಿಕರ ಮುಷ್ಕರವನ್ನು ರಾಜ್ಯ ಕರ್ನಾಟಕ ಕಾಂಗ್ರೆಸ್ ಸರಕಾರವು ಸ್ವಚ್ಛತೆ, ನೈರ್ಮಲ್ಯ ಅಂಶಗಳ ಜತೆಗೆ ಮಾನವೀಯ ಆಯಾಮದಿಂದಲೂ ನೋಡಬೇಕು ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿವಿ ಮಾತು ಹೇಳಿದ್ದಾರೆ.
ಸಮಾಜದ ಸ್ವಾಸ್ಥ್ಯ ಕಾಪಾಡುವ ಯೋಧರಾಗಿ ಮಳೆ, ಗಾಳಿ, ಬಿಸಿಲು ಲೆಕ್ಕಿಸದೇ ಕರ್ತವ್ಯ ನಿರ್ವಹಿಸುವ ಇವರ ಸೇವೆಯನ್ನು ಸರ್ಕಾರ ಹಣದ ಅಳತೆಗೋಲಿನಲ್ಲಿ ಅಳೆಯುವುದು ಬೇಡ. ಅವರ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಹಾನುಭೂತಿಯಿಂದ ಪರಿಶೀಲಿಸಿ ತುರ್ತು ಕ್ರಮ ಕೈಗೊಳ್ಳಬೇಕು.
ಈಗಾಗಲೇ ಎಲ್ಲೆಡೆ ರಾಶಿರಾಶಿ ಕಸ ಬೀಳುತ್ತಿದೆ ಎಂಬುದನ್ನು ಅವರು ಗಮನಿಸಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.