ಸಿಎಂ ಸಿದ್ದರಾಮಯ್ಯ ಬದಲಾವಣೆ ಇಲ್ಲ-ಕೆ.ಹೆಚ್. ಮುನಿಯಪ್ಪ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ. ಮುಖ್ಯಮಂತ್ರಿಯಾಗಿ ಅವರೇ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಉತ್ತಮವಾಗಿ ಸರ್ಕಾರ ನಡೆಸುತ್ತಿದ್ದು ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಕಾಂಗ್ರೆಸ್ ನೀಡಿ ಐದು ಗ್ಯಾರಂಟಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಕೊಟ್ಟು ಅನುಷ್ಠಾನ ಮಾಡಿದ್ದೇವೆ. ಸಿದ್ದರಾಮಯ್ಯ ಒಳ್ಳೆಯ ಬಜೆಟ್  ನೀಡಲಿದ್ದಾರೆ ಎಂದು ಅವರು ಸಮರ್ಥಸಿಕೊಂಡರು.

 ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂಬ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಮುನಿಯಪ್ಪ ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಡಿಸಿಎಂ ಆಗಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಆ ಪ್ರಶ್ನೆ ಈಗ ನಮ್ಮ ಮುಂದೆ ಇಲ್ಲ ಎಂದರು.
ಸಿದ್ದರಾಮಯ್ಯ ನವೆಂಬರ್ ಅಂತ್ಯದ ವೇಳೆಗೆ ಅಧಿಕಾರದಿಂದ ಕೆಳಗಿಳಿಯಬಹುದು ಎಂಬ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ
, ಅದು ಹೇಳೋರಿಗೆ ಗೊತ್ತು. ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಖಾಯಂ ಸಂಚಾರಿ ಪೀಠ ಆರಂಭಿಸುತ್ತಿದ್ದೇವೆ. ಇದರಿಂದ 7 ಜಿಲ್ಲೆಯ ಜನರಿಗೆ ಪರಿಹಾರ ಸಿಗಲಿದೆ. ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಿ ನ್ಯಾಯ ದೊರಕಿಸುವ ಕೆಲಸ ಆಗಲಿದೆ. ಅದೇ ರೀತಿ ಮಧ್ಯಾಹ್ನ ಸುವರ್ಣ ವಿಧಾನಸೌಧದಲ್ಲಿ ಬೆಳಗಾವಿ ವಲಯದ ಏಳು ಜಿಲ್ಲೆಗಳ ನಮ್ಮ ಇಲಾಖೆಗಳ ಉಪ ನಿರ್ದೇಶಕರು, ಮೌಲ್ಯಮಾಪನ ಇಲಾಖೆ ಮತ್ತು ಆಹಾರ ನಿಗಮದ ಅಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಸಚಿವ ಮುನಿಯಪ್ಪ ತಿಳಿಸಿದರು.

ತೂಕ ಮತ್ತು ಅಳತೆಯಲ್ಲಿ ಮೋಸ ಮಾಡುತ್ತಿದ್ದ ನ್ಯಾಯಬೆಲೆ ಅಂಗಡಿಗಳಿಗೆ ದಂಡ ವಿಧಿಸಿವುದರ ಜೊತೆಗೆ ಅಂಗಡಿ ಸೀಜ್ ಮಾಡುತ್ತೇವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮೌಲ್ಯಮಾಪನ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಅದೇ ರೀತಿ ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸ ತಡೆಯಲು ಎಪಿಎಂಸಿಗಳಲ್ಲಿ ತೂಕದ ಯಂತ್ರ ಅಳವಡಿಸುತ್ತೇವೆ. ಅಲ್ಲದೇ ಎಲ್ಲಾ ಕಾರ್ಖಾನೆಗಳಲ್ಲೂ ಸರ್ಕಾರದಿಂದಲೇ ತೂಕದ ಯಂತ್ರ ಅಳವಡಿಸಿ 1 ಕೆ.ಜಿ ಕೂಡ ತೂಕದಲ್ಲಿ ವ್ಯತ್ಯಾಸ ಆಗದಂತೆ ಕ್ರಮ ವಹಿಸುತ್ತೇವೆ ಎಂದು ಮುನಿಯಪ್ಪ ಭರವಸೆ ನೀಡಿದರು.

 

Share This Article
error: Content is protected !!
";