ಚಂದ್ರವಳ್ಳಿ ನ್ಯೂಸ್, ಬೆಂಗಳೂರು
ದಾವೋಸ್ನಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕದ ನೆರೆ ರಾಜ್ಯಗಳ ಮುಖ್ಯಮಂತ್ರಿಗಳು ಬಂಡವಾಳ ಹೂಡಿಕೆಯನ್ನು ಆಕರ್ಷಿಸಿದರೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಮಾತ್ರ ಗಪ್ಚುಪ್!! ಆಗಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಜಿ.ಫಡ್ನವಿಸ್ ಬರೋಬ್ಬರಿ ₹6.26 ಲಕ್ಷ ಕೋಟಿ ಹೂಡಿಕೆಯನ್ನು ಆಕರ್ಷಿಸುವ ಜೊತೆ 3 ಲಕ್ಷಕ್ಕೂ ಹೆಚ್ಚು ಉದ್ಯೋಗಗಳನ್ನು ಸೃಜಿಸುವತ್ತ ಮುನ್ನಡೆಯುತ್ತಿದ್ದಾರೆ ಎಂದು ಬಿಜೆಪಿ ಮೆಚ್ಚುಗೆ ವ್ಯಕ್ತಪಡಿಸಿದೆ.
ಆದರೆ ಸಿಎಂ ಸಿದ್ದರಾಮಯ್ಯ ಅವರು ಮಾತ್ರ ಕರ್ನಾಟಕ್ಕೆ ಹೂಡಿಕೆಯನ್ನು ಆಕರ್ಷಿಸುತ್ತಿಲ್ಲ, ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿಲ್ಲ!! “ಹಾತ್ಬದ್ಲೆಗಾ ಹಾಲಾತ್” ಎಂದರೆ ಇದೇನಾ ಕರ್ನಾಟಕ ಕಾಂಗ್ರೆಸ್??!! ಎಂದು ಬಿಜೆಪಿ ಟೀಕಿಸಿದೆ.

