ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಾವೇರಿ ನಿವಾಸದಲ್ಲಿ 45 ನಿಮಿಷಗಳ ಕಾಲ ಗಣತಿದಾರರಿಗೆ ಮಾಹಿತಿ ನೀಡಿದ್ದು, ಸಿಬ್ಬಂದಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ.
ಒಟ್ಟು 5 ಜನರನ್ನು ಒಳಗೊಂಡಿದ್ದ ಸಮೀಕ್ಷಾ ತಂಡ ಸಿಎಂ ಮನೆಯಲ್ಲಿ ಗಣತಿ ಕಾರ್ಯ ನಡೆಸಿತು. ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗೆ ಮಾಹಿತಿ ನೀಡಿ ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದ್ದೇನೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ.
ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

