ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ರಾಜ್ಯದ ಸಮಸ್ತ ಮಾದಿಗ ಸಮುದಾಯದ ಅಭ್ಯುದಯಕ್ಕೆ ಪ್ರೇರಕವಾಗುವ ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತೆರಬೇಕೆಂದು ಒತ್ತಾಯಿಸಿ ರಾಜ್ಯದ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯನವರಿಗೆ ಮಾದಿಗ ಸಮುದಾಯದ ವಿವಿಧ ಸಂಘಟನೆಗಳು ನಗರ ಬೈಪಾಸ್ ರಸ್ತೆಯಲ್ಲಿ ಕಾರು ತಡೆದು ಮನವಿ ಸಲ್ಲಿಸಿದರು.
ಮಾದಿಗ ಸಮುದಾಯದ ಹಿರಿಯ ಮುಖಂಡ, ನಿವೃತ್ತ ಜಂಟಿ ನಿರ್ದೇಶಕ ಪ್ರೊ.ಸಿ.ಕೆ.ಮಹೇಶ್, ಮಾದಿಗ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಶಿವಮೂರ್ತಿ, ಮಾದಿಗ ದಂಡೋರ ಜಿಲ್ಲಾ ಸಮಿತಿ ಅಧ್ಯಕ್ಷ ದ್ಯಾವರನಹಳ್ಳಿ ತಿಪ್ಫೇಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ತಿಮ್ಮರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ರವಿಚಂದ್ರ, ಎಂ.ಮಲ್ಲಿಕಾರ್ಜುನ್, ಬಿ.ಪಿ.ಪ್ರಕಾಶ್‌ಮೂರ್ತಿ, ಆರ್.ವೀರಭದ್ರಪ್ಪ ಮುಂತಾದವರು ಒಳಮೀಸಲಾತಿ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.
ಪ್ರಸ್ತುತ ಸರ್ಕಾರ ಮಾದಿಗ ಸಮುದಾಯದ ಒಳಮೀಸಲಾತಿಯನ್ನು ಜಾರಿಗೊಳಿಸಿದಲ್ಲಿ ಮಾತ್ರ ಮುಂದಿನ ಭವಿಷ್ಯದ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಜ್ವಲಭವಿಷ್ಯವಿದೆ. ಸಮುದಾಯ ಸದಾಕಾಲ ಕಾಂಗ್ರೆಸ್ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.
ಮನವಿ ಪಡೆದ ನಂತರ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ನಮ್ಮ ಸರ್ಕಾರ ಮಾದಿಗ ಒಳಮೀಸಲಾತಿ ವಿರೋಧಯಲ್ಲ. ಒಳಮೀಸಲಾತಿಯನ್ನು ಜಾರಿ ಕುರಿತು ಈಗಾಗಲೇ ಚರ್ಚೆ ನಡೆದಿದೆ. ಶೀಘ್ರದಲ್ಲೇ ರಾಜ್ಯದ ಮಾದಿಗ ಸಮುದಾಯದ ಅಭಿವೃದ್ದಿಗೆ ಒಳಮೀಸಲಾತಿ ಜಾರಿಗೊಳಿಸುವ ಉದ್ದೇಶ ಸರ್ಕಾರದ್ದಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ, ಮಾಜಿ ಸಚಿವ ಎಚ್.ಆಂಜನೇಯ, ಶಾಸಕ ಕೆ.ಸಿ.ವೀರೇಂದ್ರ, ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಕಂದಿಕೆರೆಸುರೇಶ್‌ಬಾಬು, ಎಂ.ಜೆ.ರಾಘವೇಂದ್ರ ಮುಂತಾದವರು ಉಪಸ್ಥಿತರಿದ್ದರು.