ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕಹಾಗೂ ವಲಯ ಕಚೇರಿಗಳ ಬಳಕೆಗಾಗಿ 68 ಪರಿಸರ ಸ್ನೇಹಿ ಇವಿ ವಾಹನಗಳಿಗೆ ಚಾಲನೆ ನೀಡಿದರು.
ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಸಕ ನರೇಂದ್ರಸ್ವಾಮಿ ಸೇರಿದಂತೆ ಮತ್ತಿತರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

