ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಶುಕ್ರವಾರ ಅವರು ಮಾತನಾಡಿ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಹಿರಿಯೂರು ಬಸ್ ಅಪಘಾತ ತನಿಖೆಗೆ:
ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸುತ್ತಾ, ಈ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಹೆಣ್ಣು ಮಗು ಹಾಗೂ ಇಬ್ಬರು ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.
ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಸಚಿವ ದಿ. ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ದಾವಣಗೆರೆಗೆ ಆಗಮಿಸಿ ಜಿಲ್ಲಾಡಳಿತದಿಂದ ಗೌರವ ವಂದನೆ ಸ್ವೀಕರಿಸಿ, ಸಾರ್ವಜನಿಕರ ಅಹವಾಲು ಪಡೆದರು.
ಬಳಿಕ ಶಾಮನೂರು ಶಿವಶಂಕರಪ್ಪ ಅವರ ಸಮಾದಿಗೆ ಪುಷ್ಪನಮನ ಸಲ್ಲಿಸಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಈಶ್ವರ್ ಖಂಡ್ರೆ ಸೇರಿ ಹಲವು ಮಂದಿ ಸಚಿವರು, ಶಾಸಕರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

