ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳ ಜೊತೆ ಬಜೆಟ್ ಪೂರ್ವ ಸಭೆ ನಡೆಸಿ, ಸಮುದಾಯಗಳ ಕುಂದುಕೊರತೆಗಳು ಹಾಗೂ ನಿರೀಕ್ಷೆಗಳನ್ನು ಆಲಿಸಿ, ಅವುಗಳ ಈಡೇರಿಕೆಗೆ ಬಜೆಟ್ ಮೂಲಕ ಗರಿಷ್ಠ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ಈ ಸಭೆಯಲ್ಲಿ, ಶಿಕ್ಷಣ ಸಚಿವರಾದ ಮಧು ಎಸ್. ಬಂಗಾರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು, ಹಿಂದುಳಿದ ವರ್ಗ, ಜಾತಿ ಮತ್ತು ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.