ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
1991ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎರಡನೇ ಬಾರಿಗೆ ಸ್ಪರ್ಧಿಸಿದ್ದಾಗ ನನ್ನನ್ನು ಮೋಸದಿಂದ ಸೋಲಿಸಲಾಯಿತು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಎಬ್ಬಿಸಿದೆ.
ವಕೀಲರ ಸಂಘದಿಂದ ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಮಾಜಿ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಭಾಷಣ ಮಾಡುವ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾತನಾಡಿ, 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಕಾಂಗ್ರೆಸ್‌ನ ಬಸವರಾಜ ಪಾಟೀಲ್ ಅನ್ವರಿ ವಿರುದ್ಧ ಸೋಲು ಕಂಡಿದ್ದರು. ಈ ಚುನಾವಣೆಯಲ್ಲಿ ತಮ್ಮನ್ನು ಮೋಸದಿಂದ ಸೋಲಿಸಿದ್ದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ, ಇದೀಗ ಸಿದ್ದರಾಮಯ್ಯನವರ ಈ ಹೇಳಿಕೆ ಕಾಂಗ್ರೆಸ್ ಹಾಗೂ ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ ತಿರುಗುಬಾಣವಾಗಿದೆ.
2024ರ ಲೋಕಸಭೆ ಚುನಾವಣೆ ವೇಲೆ ಮತಗಳ್ಳತನವಾಗಿದೆ ಎಂದು ರಾಹುಲ್ ಗಾಂಧಿ ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯನವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಅಂದು ಸಿದ್ದರಾಮಯ್ಯನವರನ್ನ ಕಾಂಗ್ರೆಸ್ ಮೋಸದಿಂದ ಸೋಲಿಸಿತ್ತೇ. ಹಾಗಾದ್ರೆ, ಕಾಂಗ್ರೆಸ್ ಅಂದು ಮತಗಳ್ಳತನ ಮಾಡಿತ್ತಾ ಎನ್ನುವ ಪ್ರಶ್ನೆ, ಚರ್ಚೆಗಳು ಜೋರಾಗಿವೆ. ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ, ಅಂದು ಜೆಡಿಎಸ್ ನಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ ಮೋಸದಿಂದ ಸೋಲಿಸಿದೆ ಅಲ್ಲವೇ? ಎಂದು ಸಿದ್ದರಾಮಯ್ಯನವರಿಗೆ ಪ್ರಶ್ನಿಸಿದೆ. ಸಿದ್ದರಾಮಯ್ಯ ಅನು ಹೇಳಿದರು?
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾಡಿರುವ ಮತಗಳ್ಳತನ ಆರೋಪ ರಾಷ್ಟ್ರರಾಜಕಾರಣದಲ್ಲಿ ಭಾರೀ ಸಂಚಲಕ್ಕೆ ಕಾರಣವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಭಾರೀ ಮತಗಳ್ಳತನವಾಗಿದ್ದರಿಂದ ಕಾಂಗ್ರೆಸ್ ಗೆ ಸೋಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಮಾಡುತ್ತಿದ್ದು, ಈ ಸಂಬಂದ ಕೇಂದ್ರ ಸರ್ಕಾರ ಹಾಗೂ ಚುನಾವಣೆ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು 1991ರಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಇದೇ ಮತಗಳ್ಳತನದಿಂದ ಸೋಲಿಸಿದ್ರು ಎಂದು ಹೇಳಿಕೆ ನೀಡಿದ್ದಾರೆ.
ಎರಡನೇ ಬಾರಿಗೆ 1991ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾಗ ಮೋಸದಿಂದ ನನ್ನನ್ನು ಸೋಲಿಸಲಾಯಿತು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್‌ಅವರು ನೆರವು ನೀಡಿದ್ದರು ಎಂದು ಸ್ಮರಿಸಿಕೊಂಡರು.
ಇದನ್ನೇ ಅಸ್ತ್ರ ಮಾಡಿಕೊಂಡ ಬಿಜೆಪಿ, ಸಿದ್ದರಾಮಯ್ಯನವರೇ 1991 ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಜನತಾದಳದಿಂದ ಸ್ಪರ್ಧಿಸಿದ್ದ ನಿಮ್ಮನ್ನು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಬಸವರಾಜ ಪಾಟೀಲ್ ಅನ್ವರಿ ಅವರು ಸೋಲಿಸಿದ್ದು “ವೋಟ್ಚೋರಿ” ಮೂಲಕ ಎಂಬುದನ್ನು ನೀವೇ ತುಂಬಿದ ಸಭೆಯಲ್ಲಿ ಒಪ್ಪಿಕೊಂಡಿದ್ದೀರಿ ಎಂದು ಬಿಜೆಪಿ ಕಾಲೆಳೆದಿದೆ.
ಸಾಕ್ಷಿ ಸಮೇತ ಟಾಂಗ್ ಕೊಟ್ಟ ಅಮಿತ್ ಮಾಳವಿಯಾ–ಈ ಬಗ್ಗೆ ಬಿಜೆಪಿಯ ಐಟಿ ಸೆಲ್‌ಮುಖ್ಯಸ್ಥ ಅಮಿತ್ ಮಾಳವಿಯಾ ಸಹ ಟ್ವೀಟ್ ಮಾಡಿದ್ದು 1991 ರ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ “ಚುನಾವಣಾ ವಂಚನೆ”ಗೆ ಬಲಿಯಾಗಿದ್ದಾಗಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ.
ಮೋಸದಿಂದ ಸೋಲಿಸಿದರು ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಈ ವೀಡಿಯೊ ಇದಕ್ಕೆ ಸಾಕ್ಷಿ. ಮತಗಳ್ಳತನ ವಿರುದ್ಧ ಹೋರಾಡಿದ ಕಾಂಗ್ರೆಸ್ಸಿನ ಅದೇ ವ್ಯಕ್ತಿ ಇಂದು ಅವರ ಮುಖ್ಯಮಂತ್ರಿಯಾಗಿದ್ದು, ಮತ ಅಧಿಕಾರ್ ರ್ಯಾಲಿಯ ನೇತೃತ್ವ ವಹಿಸಿದ್ದಾರೆ ಎಂದು ರಾಹುಲ್ ಗಾಂಧಿ ಟಾಂಗ್ ಕೊಟ್ಟರು.

