ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರದ ಎರಡು ವರ್ಷದ ಸಮಾವೇಶ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರಾದ ಜಿ.ಪರಮೇಶ್ವರ್, ಕಾನೂನು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ, ಇಂಧನ ಸಚಿವರಾದ ಕೆ.ಜೆ.ಜಾರ್ಜ್ ವಿಶೇಷ ಉಪಸ್ಥಿತಿ ವಹಿಸಲಿದ್ದಾರೆ.
ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಶಾಸಕರು, ಹಿರಿಯ ಅಧಿಕಾರಿಗಳು, ಗಣ್ಯರು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.