ಪಿಯು ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ
2026-27ನೇ ಸಾಲಿಗೆ ಆಯ್ದ ಕಾಲೇಜುಗಳಲ್ಲಿ ಪಿ.ಯು.ಸಿ ಶಿಕ್ಷಣದೊಂದಿಗೆ 2 ವರ್ಷಗಳ ನೀಟ್, ಐಐಟಿ, ಜೆಇಇ, ಐಸಿಎಆರ್, ಸಿಯುಎಟಿ, ಸಿಎಲ್‌ಎಟಿ ಹಾಗೂ ಸಿಎ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಏ.21 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್  https://dom.karnataka.gov.in     

- Advertisement - 

ಮೂಲಕ ಆನ್‌ಲೈನ್‌ಯಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ, ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಎಂದು ಪ್ರಕಟಣೆ ತಿಳಿಸಿದೆ.

- Advertisement - 
Share This Article
error: Content is protected !!
";