ಕೆ.ಎ.ಎಸ್ ಪರೀಕ್ಷೆಗೆ ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಲೋಕ ಸೇವಾ ಆಯೋಗದವರು 2024ರ ಡಿಸೆಂಬರ್ 29ರಂದು ನಡೆಸಲಿರುವ ಕೆಎಎಸ್ ಪರೀಕ್ಷೆಗೆ 30 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

- Advertisement - 

ಆಸಕ್ತರು ನವೆಂಬರ್ 16 ರೊಳಗಾಗಿ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.

- Advertisement - 

ಹೆಚ್ಚಿನ ವಿವರಗಳಿಗೆ 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪೆÇ್ರ. ಕೆ.ಬಿ. ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";