ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಆಡಳಿತ ವಿಕೇಂದ್ರೀಕರಣ ಹಾಗೂ ಆಡಳಿತಾತ್ಮಕ ಕಾರ್ಯಗಳ ಶೀಘ್ರ ಅನುಷ್ಠಾನಕ್ಕಾಗಿ ಬಿಬಿಎಂಪಿಯನ್ನು 5 ಪಾಲಿಕೆಗಳಾಗಿ ವಿಂಗಡಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರನ್ನು ಕೇಂದ್ರೀಕೃತ ಆಡಳಿತ ವ್ಯವಸ್ಥೆಯಿಂದ ವಿಕೇಂದ್ರೀಕರಣದ ಕಡೆಗೆ ಕೊಂಡೊಯ್ದು, ಬೆಂಗಳೂರು ನಗರ ನಿವಾಸಿಗಳಿಗೆ ಗುಣಮಟ್ಟದ ಸೇವೆ, ಸೌಲಭ್ಯ ಒದಗಿಸಲು ನಾವು ಬದ್ಧರಿದ್ದೇವೆ.
ಸ್ವಾಭಿಮಾನ, ಸ್ವಾವಲಂಬನೆ ಹಾಗೂ ಘನತೆಯ ಬದುಕು ಸ್ವಾತಂತ್ರ್ಯದ ನೈಜ ಆಶಯ. ಈ ಆಶಯದ ಈಡೇರಿಕೆಗೆ ನಾವು ಪ್ರಾಮಾಣಿಕ ಶ್ರಮಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

