ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಸೆ.29ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ, ನಿಷ್ಪಕ್ಷಪಾತವಾಗಿ, ಪರಿಣಾಮಕಾರಿಯಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಸಾಮಾನ್ಯ ಪ್ರವೇಶ ಪರೀಕ್ಷಾ (ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ) ಸಿದ್ಧತೆಯ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಸೆ.29ರಂದು ನಡೆಯುವ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಅರ್ಹತಾ ಪರೀಕ್ಷೆಯಾಗಿದೆ. ಜಿಲ್ಲೆಯ 46 ಪರೀಕ್ಷಾ ಕೇಂದ್ರಗಳಿAದ ಒಟ್ಟು 17798 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊAಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಯಾವುದೇ ಕಾರಣಕ್ಕೂ ಪೀಠೋಪಕರಣ, ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯಗಳ ಕೊರತೆ ಆಗಬಾರದು. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಅಗತ್ಯ ಕ್ರಮವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರೀಕ್ಷಾ ಕಾರ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ ಯಾವುದೇ ಲೋಪದೋಷಗಳು ಆಗದಂತೆ ತಮಗೆ ನೀಡಿರುವ ಜವಾಬ್ದಾರಿಯನ್ನು ಬಹಳ ಎಚ್ಚರಿಕೆಯಿಂದ ಪರೀಕ್ಷಾ ಕಾರ್ಯ ನಿರ್ವಹಿಸಬೇಕು. ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಗತ್ಯ ಸಿದ್ಧತೆಯನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತ ವಾತವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್ನೆಟ್ ಕೇಂದ್ರಗಳನ್ನು ಪರೀಕ್ಷಾ ನಡೆಯುವ ದಿನದಂದು ಬೆಳಿಗ್ಗೆ 9 ಗಂಟೆಯಿAದ ಮಧ್ಯಾಹ್ನ 1.30 ಗಂಟೆಯವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ಗಳನ್ನು ಹಾಗೂ ಎಲೆಕ್ಟಾçನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಪನಿರ್ದೇಶಕ ಪುಟ್ಟಸ್ವಾಮಿ ಮಾತನಾಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯ ಸ್ಪರ್ಧಾತ್ಮಕ ಸಾಮಾನ್ಯ ಪ್ರವೇಶ ಪರೀಕ್ಷೆಯ ಕಡ್ಡಾಯ ಕನ್ನಡ ಪರೀಕ್ಷೆಯು ಇದೇ ಸೆ.29ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 46 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿಲಾಗಿದ್ದು, ಇದರಲ್ಲಿ 17798 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
ಜಿಲ್ಲೆಯ ಮೊಳಕಾಲ್ಮುರು ಹೊರತುಪಡಿಸಿ ಚಳ್ಳಕೆರೆಯಲ್ಲಿ 6 ಪರೀಕ್ಷಾ ಕೇಂದ್ರಗಳಿAದ 2352 ಅಭ್ಯರ್ಥಿಗಳು, ಚಿತ್ರದುರ್ಗ ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಿAದ 10082 ಅಭ್ಯರ್ಥಿಗಳು, ಹಿರಿಯೂರು 5 ಕೇಂದ್ರಗಳಿAದ 2016 ಅಭ್ಯರ್ಥಿಗಳು, ಹೊಳಲ್ಕೆರೆ 4 ಪರೀಕ್ಷಾ ಕೇಂದ್ರಗಳಿAದ 1272 ಅಭ್ಯರ್ಥಿಗಳು ಹಾಗೂ ಹೊಸದುರ್ಗದಲ್ಲಿ 5 ಪರೀಕ್ಷಾ ಕೇಂದ್ರಗಳಿAದ 2076 ಅಭ್ಯರ್ಥಿಗಳು ಸೇರಿದಂತೆ ಒಟ್ಟು 17798 ಅಭ್ಯರ್ಥಿಗಳು ಪರೀಕ್ಷಾ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸೂಕ್ಷö್ಮ ಮತ್ತು ಅತೀ ಸೂಕ್ಷö್ಮ ಕೇಂದ್ರಗಳು ಇರುವುದಿಲ್ಲ. ಎಲ್ಲ ಪರೀಕ್ಷಾ ಕೇಂದ್ರಗಳಿಗೂ ಹೆಚ್ಚಿನ ಬಂದೋಬಸ್ತ್ ಅವಶ್ಯಕತೆ ಇದೆ ಎಂದು ಹೇಳಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವೀಕ್ಷಕರು ಇದ್ದರು.