ಸಿಬ್ಬಂದಿ ಆಯ್ಕೆ ಆಯೋಗದಿಂದ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಿಬ್ಬಂದಿ ಆಯ್ಕೆ ಆಯೋಗ ಕರ್ನಾಟಕ ಮತ್ತು ಕೇರಳ ವಿಭಾಗದ ವತಿಯಿಂದ ಉದ್ಯೋಗಾಂಕ್ಷಿಗಳಿಗೆ ಕಿರಿಯ ದರ್ಜೆಯ ಕ್ಲರ್ಕ್/ಕಿರಿಯ ಸಚಿವಾಲಯ ಸಹಾಯಕರು/

- Advertisement - 

ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಕೇಂದ್ರ ಸರ್ಕಾರದ ವಿವಿಧ ಮಂತ್ರಾಲಯಗಳ ಸುಮಾರು 3,131 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಸಂಯೋಜಿತ ಹೈಯರ್ ಸೆಕೆಂಡರಿ ಹಂತದ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

- Advertisement - 

ಅಭ್ಯರ್ಥಿಗಳು 18 ರಿಂದ 27 ವರ್ಷದೊಳಗಿದ್ದು, ಯಾವುದೇ ಅಂಗೀಕೃತ ಸಂಸ್ಥೆಯಿಂದ ಪಿಯುಸಿ ಪಾಸಾಗಿರಬೇಕು. ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಲು ಜುಲೈ 18 ಕೊನೆಯ ದಿನವಾಗಿರುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು ಸೆಪ್ಟಂಬರ್ 8 ರಿಂದ 18 ರವರೆಗೆ ನಡೆಸಲು ಉದ್ದೇಶಿಸಲಾಗಿದೆ.

ಹೆಚ್ಚಿನ ವಿವರಗಳನ್ನು https://ssc.gov.in ಹಾಗೂ  https://ssckkr.kar.nic.in ರಲ್ಲಿ ಪಡೆಯಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

- Advertisement - 

 

Share This Article
error: Content is protected !!
";