ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26
ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ/ಐಎಎಸ್  ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದ್ದು, ಅರ್ಜಿಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ https://dom.karnataka.gov.in ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

- Advertisement - 

ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷಕ್ಕಿಂತ ಮೀರಿರಬಾರದು.

ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು. ಅಭ್ಯರ್ಥಿಯು ಕಳೆದ 03 ವರ್ಷಗಳಲ್ಲಿ ಕನಿಷ್ಟ ಒಂದು ಬಾರಿಯಾದರೂ ಯುಪಿಎಸ್‍ಸಿ, ಐಎಎಸ್  ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಬೇಕು.

- Advertisement - 

ಅಭ್ಯರ್ಥಿಯ ವಯೋಮಿತಿ ಕನಿಷ್ಟ 21 ಹಾಗೂ ಗರಿಷ್ಟ 35 ವರ್ಷಗಳು ಮೀರಿರಬಾರದು. ೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

Share This Article
error: Content is protected !!
";