ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ರೈತರಿಗೆ ವಂಚಿಸಿದ ವ್ಯಾಪಾರಿ ಪರ ನಿಂತಿರುವ ಹಾಗೂ ಅಧಿಕಾರ ದುರ್ಬಳಕೆ ಮತ್ತು ಸ್ವಜನಪಕ್ಷಪಾತ ಎಸಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ರನ್ನು ಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ಜೆಡಿಎಸ್ ವತಿಯಿಂದ ದೂರು ಸಲ್ಲಿಸಲಾಗಿದೆ.
ಜೆಡಿಎಸ್ ಪಕ್ಷದ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಕುಮಾರ್‌ಎಸ್.ಪಿ ಅವರು, ಗೌರವಾನ್ವಿತ ರಾಜ್ಯಪಾಲರಿಗೆ ದೂರು ಸಲ್ಲಿಸಿ ಜಮೀರ್ ಅವರನ್ನು ಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದರು.

