ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕಾರ್ಯ ಜೂನ್ 08 ರವರೆಗೆ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪರಿಶಿಷ್ಟ ಜಾತಿ ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕಸದಸ್ಯ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Empirical Data) ಸಂಗ್ರಹಿಸುವ ಕುರಿತು ಮೇ 5, 2025 ರಿಂದ ಸಮೀಕ್ಷಾ ಕಾರ್ಯವನ್ನು ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಿ ಜೂನ್ 1 ರವರೆಗೆ  ಸಮಗ್ರ ಸಮೀಕ್ಷೆ ನಡೆಸಲು ಅವಧಿ ವಿಸ್ತರಿಸಲಾಗಿತ್ತು.

- Advertisement - 

ಆದರೆ ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುಲ್ಲ ಎಂದು ತಿಳಿಸಿ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ವಿನಂತಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಜನರು ಈ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ವಿಶೇಷ ಶಿಬಿರಗಳನ್ನು (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) 2025ನೇ ಜೂನ್ 02 ರಿಂದ ಜೂನ್ 08 ರವರೆಗೆ ಹಾಗೂ ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ಸಲ್ಲಿಸಲು 2025 ನೇ ಜೂನ್ 08 ರವರೆಗೆ ಅವಧಿ ವಿಸ್ತರಿಸಲಾಗಿದೆ.

- Advertisement - 

ಗಣತಿದಾರರು ರಜಾ ದಿನಗಳಲ್ಲಿಯೂ ಸಹ ಸಮೀಕ್ಷಾ ಬ್ಲಾಕ್ ನ ವಿಶೇಷ ಶಿಬಿರಗಳಲ್ಲಿ ಕಾರ್ಯನಿರ್ವಹಿಸಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ರಾಜ್ಯದ ಪರಿಶಿಷ್ಟ ಜಾತಿಗೆ ಸೇರಿದ ಪ್ರತಿಯೊಬ್ಬ ವ್ಯಕ್ತಿಯು ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";