ವೈದ್ಯಕೀಯ ಕೋರ್ಸ್‌ಗಳ ಕಡ್ಡಾಯ ಸೇವಾ (ತಿದ್ದುಪಡಿ) ಸುಗ್ರೀವಾಜ್ಞೆಗೆ ಅಂಕಿತ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ಗ್ರಾಮೀಣ ಪ್ರದೇಶದಲ್ಲಿ ನಿಗದಿಪಡಿಸಿದಷ್ಟು ಕರ್ತವ್ಯವನ್ನು ಸಲ್ಲಿಸದ ವೈದ್ಯಾಧಿಕಾರಿ ಅಥವಾ ಸಿಬ್ಬಂದಿಯನ್ನು ಗ್ರಾಮೀಣ ಪ್ರದೇಶಗಳಲ್ಲಿರುವ ಹುದ್ದೆಗೆ ವರ್ಗಾವಣೆ ಮಾಡಬೇಕು. ವಿಶೇಷ ತಜ್ಞ ವೈದ್ಯರು, ಹಿರಿಯ ವಿಶೇಷ ತಜ್ಞ ವೈದ್ಯರನ್ನು ಅವರು ಹೊಂದಿರುವ ವಿಶೇಷ ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಗುರುತಿಸಿದ ಹುದ್ದೆಗೆ ವರ್ಗಾವಣೆ ಮಾಡಬೇಕು. ವೈದ್ಯಾಧಿಕಾರಿ ಮತ್ತು ಇತರೆ ಸಿಬ್ಬಂದಿಯ ಶೇ.15ರಷ್ಟು ವರ್ಗಾವಣೆ ಹಾಗೂ ಮಹತ್ವದ ಖಾಲಿ ಹುದ್ದೆಗಳಿಗೆ ರಾಜ್ಯ ಸರ್ಕಾರವು ಕೌನ್ಸಿಲಿಂಗ್‌ ಇಲ್ಲದೆಯೂ ನಿಯೋಜಿಸಲು ಈ ಸುಗ್ರೀವಾಜ್ಞೆಯ ಮೂಲಕ ಅವಕಾಶ ನೀಡಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

- Advertisement - 

ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ಇನ್ಮುಂದೆ ಗ್ರಾಮೀಣ ಹುದ್ದೆಗಳನ್ನು ಭರ್ತಿ ಮಾಡಿದ ನಂತರ ನಗರ ಪ್ರದೇಶಗಳಲ್ಲಿನ ಹುದ್ದೆಗಳಿಗೆ ಎಂಬಿಬಿಎಸ್‌ ಪದವೀಧರರನ್ನು ನೇಮಿಸಲು ಅವಕಾಶ ಇರಲಿದೆ. ಅಲ್ಲದೆ, ಸರ್ಕಾರಿ ಕೋಟಾದಡಿ ಎಂಬಿಬಿಎಸ್‌ ವಿದ್ಯಾರ್ಥಿಗಳನ್ನು ಆದ್ಯತೆಯಲ್ಲಿ ತುಂಬಲು ಮತ್ತು ಉಳಿದ ಖಾಲಿ ಹುದ್ದೆಗಳಿಗೆ ಸಾಂಸ್ಥಿಕ ಕೋಟಾದಡಿ ಓದಿದ ವಿದ್ಯಾರ್ಥಿಗಳಿಂದ ತುಂಬಲು ಹಾಗೂ ಉಳಿದ ಹೆಚ್ಚುವರಿ ವಿದ್ಯಾರ್ಥಿಗಳಿಗೆ ಕಡ್ಡಾಯ ಸೇವೆಯಿಂದ ವಿನಾಯಿತಿ ನೀಡಲು ಕೂಡಾ ಅವಕಾಶ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";