ಜಾತಿಗಣತಿಗೆ ವಿಶೇಷ ಚೇತನ ನೌಕರರ ಬಳಕೆಗೆ ಖಂಡನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಸಮೀಕ್ಷೆಗೆ ರಾಜ್ಯದ ವಿಶೇಷ ಚೇತನ ನೌಕರರನ್ನೂ ಬಳಸಿಕೊಳ್ಳುತ್ತಿರುವುದು ದುರದೃಷ್ಟಕರ
, ಮಾನವೀಯ ಸ್ಪಂದನೆಯಿಲ್ಲದ ಸರ್ಕಾರದ ಧೋರಣೆಯನ್ನು ಇದು ಪ್ರತಿಬಿಂಬಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ವಿಶೇಷ ಚೇತನ ನೌಕರರನ್ನು ಸಮೀಕ್ಷೆ ಕಾರ್ಯದಿಂದ ಕೈ ಬಿಟ್ಟು ಸಮೀಕ್ಷೆ  ಸಂಬಂಧದ ಕಛೇರಿ ಕೆಲಸಗಳಿಗೆ ಬಳಸಿಕೊಳ್ಳಬಹುದಿತ್ತು, ಆದರೆ ವಿವೇಚನಾ ರಹಿತ ಆಡಳಿತ ವ್ಯವಸ್ಥೆಯಿಂದ ವಿಶೇಷ ಚೇತನ ನೌಕರರು ಸಂಕಷ್ಟಕ್ಕೆ ಸಿಲುಕಿರುವುದು ನಿಜಕ್ಕೂ ನೋವಿನ ಸಂಗತಿ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ಈ ನಡೆ ಖಂಡನೀಯ. 

- Advertisement - 

ಈ ಸಂಬಂಧ ಈಗಾಗಲೇ ಅಂಗವಿಕಲ ಸಂಘ, ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಕೂಡಲೇ ಈ ರೀತಿಯ ಅಪ್ರಬುದ್ಧ ನಡೆಯಿಂದ ಹಿಂದೆ ಸರಿದು ವಿಶೇಷ ಚೇತನ ನೌಕರರನ್ನು ಗಣತಿ ಕಾರ್ಯದಿಂದ ಕೈ ಬಿಡಬೇಕೆಂದು ಕರ್ನಾಟಕ ಬಿಜೆಪಿ ಒತ್ತಾಯಿಸುತ್ತದೆ ಎಂದು ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

 

- Advertisement - 

Share This Article
error: Content is protected !!
";