ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಚುನಾವಣಾ ಆಯೋಗದಲ್ಲಿ 2002 ನೇ ಏಪ್ರಿಲ್ 26 ರಿಂದ 2004 ನೇ ಮೇ 15 ರವರೆಗೆ ಮೂರನೇ ರಾಜ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಸಿ.ಚಿಕ್ಕಣ್ಣ ಅವರ ನಿಧನಕ್ಕೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಸಂತಾಪದಲ್ಲಿ ಶ್ರೀಯುತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ನಿಧನದಿಂದ ದುಃಖತಪ್ತರಾದ ಕುಟುಂಬದ ಸದಸ್ಯರಿಗೆ ಹಾಗೂ ಆಪ್ತರಿಗೆ ಶ್ರೀಯುತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿ ತಮ್ಮ ಸಂತಾಪ ತಿಳಿಸಿದ್ದಾರೆ ಎಂದು ರಾಜ್ಯಚುನಾವಣಾ ಆಯೋಗದ ಪ್ರಭಾರ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

