ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸೆಪ್ಟೆಂಬರ್13ರವರೆಗೆ 11ನೇ ಕಾಮನ್‌ವೆಲ್ತ್‌ಸಂಸದೀಯ ಸಂಘದ ಭಾರತ ವಿಭಾಗದ ಸಮ್ಮೇಳನ ನಡೆಯಲಿದ್ದು, ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಈ ಸಮ್ಮೇಳನದಲ್ಲಿ ವಿವಿಧ ರಾಜ್ಯಗಳ ವಿಧಾನಸಭೆಯ ಸಭಾಧ್ಯಕ್ಷರು, ಉಪಸಭಾಧ್ಯಕ್ಷರು, ಸಭಾಪತಿಗಳು, ಉಪಸಭಾಪತಿಗಳು, ಲೋಕಸಭೆ ಹಾಗೂ ರಾಜ್ಯಸಭೆಯ ಮಹಾಕಾರ್ಯದರ್ಶಿಗಳು, ವಿಧಾನಸಭೆ
ಹಾಗೂ ವಿಧಾನಪರಿಷತ್‌ಕಾರ್ಯದರ್ಶಿಗಳ ಜೊತೆಗೆ ಕಾಮನ್‌ವೆಲ್ತ್‌ರಾಷ್ಟ್ರಗಳ 9 ಮಂದಿ ವಿಶೇಷ ಅತಿಥಿಗಳು ಭಾಗವಹಿಸಲಿದ್ದಾರೆ. ಪ್ರಜಾಪ್ರಭುತ್ವವನ್ನು ಉಳಿಸಲು, ಮುಂದಿನ ಪೀಳಿಗೆಯ ಭವಿಷ್ಯವನ್ನು ರೂಪಿಸಲು ಈ ಸಮ್ಮೇಳನವು ಸಹಕಾರಿಯಾಗಲಿದೆ ಎಂದು ಡಿಸಿಎಂ ತಿಳಿಸಿದರು.

