ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಕೆಪಿಎಸ್ಸಿ ಪರೀಕ್ಷೆಗಳ ಗೊಂದಲಗಳು ನಿಲ್ಲುವ ಲಕ್ಷಣ ಕಾಣುತ್ತಿಲ್ಲ ಎಂದು ಬಿಜೆಪಿ ಪಕ್ಷದ ನಾಯಕ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ 97 ಹುದ್ದೆಗಳಿಗೆ ಭಾನುವಾರ ನಡೆದ ಪರೀಕ್ಷೆಯ ವೇಳೆ ಮೇಲ್ವಿಚಾರಕರ ಎಡವಟ್ಟು ಹಾಗೂ ಪರೀಕ್ಷಾರ್ಥಿಗಳಿಗೆ ಪ್ರಶ್ನೆಪತ್ರಿಕೆ ವಿತರಣೆಯನ್ನೇ ಅರ್ಧ ಗಂಟೆ ತಡಮಾಡಿರುವುದಲ್ಲದೇ ಮೊದಲೇ ಒಡೆದ ಕವರ್ ನಲ್ಲಿದ್ದ ಪ್ರಶ್ನೆಪತ್ರಿಕೆ ವಿತರಿಸಿರುವುದು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಖೆ ವ್ಯಕ್ತವಾಗಿ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.
ಕಠಿಣ ಪರಿಶ್ರಮದಿಂದ ಉದ್ಯೋಗ ಅರಸಿ ಪರೀಕ್ಷೆಗಳನ್ನು ಬರೆಯುವ ಸಾವಿರಾರು ಉದ್ಯೋಗಾಕಾಂಕ್ಷಿಗಳ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಲಿ, ಅಲ್ಲದೇ KPSC ಎಡವಟ್ಟುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.