ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್, ದೀಪ್ತಿ ಭಾಸ್ತಿ ಅವರಿಗೆ ಮೇ 28ಕ್ಕೆ ಅಭಿನಂದನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್
, ದೀಪ್ತಿ ಭಾಸ್ತಿ ಅವರಿಗೆ ಗಾಂಧಿಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಮೇ 28 ಬುಧವಾರ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

- Advertisement - 

ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿರುವ ಬಾನುಮುಷ್ತಾಕ್ ಮತ್ತು ದೀಪಾಬಸ್ತಿ ಅವರು ಇಬ್ಬರೂ ಪತ್ರಕರ್ತರಾಗಿದ್ದವರು ಎನ್ನುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿ.

- Advertisement - 

ಬಾನುಮುಷ್ತಾಕ್ ಅವರು ಹಾಸನದಿಂದ ಲಂಕೇಶ್ ಪತ್ರಿಕೆಗೆ ವರದಿಗಾರ್ತಿಯಾಗಿದ್ದವರು ಮತ್ತು ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯೆಯಾಗಿದ್ದರು.

ಬಾನುಮುಷ್ತಾಕ್ ಅವರ ಎದೆಯ ಹಣತೆ (ಹಾರ್ಟ್ಸ್ ಲ್ಯಾಂಪ್) ಕಥೆಗಳನ್ನು ಅನುವಾದ ಮಾಡಿದ ಕೊಡಗಿನ ದೀಪಾ ಬಸ್ತಿ ಅವರು ಇಂಡಿಯನ್ ಎಕ್ಸ್ ಪ್ರೆಸ್ ಮತ್ತು ಟೈಂಮ್ಸ್ ಆಫ್ ಇಂಡಿಯಾದಲ್ಲಿ ಪತ್ರಕರ್ತೆಯಾಗಿದ್ದವರು.

- Advertisement - 

ಹಾಗಾಗಿ ವೃತ್ತಿ ಬಾಂಧವರಾಗಿದ್ದ ಇಬ್ಬರೂ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ನಿರ್ಧರಿಸಿ ಈ ಕಾರ್ಯಕ್ರಮವನ್ನು ಕರ್ನಾಟಕ ಪತ್ರಕರ್ತೆಯರ ಸಂಘ, ಬಹುರೂಪಿ ಮತ್ತು ಗಾಂಧಿ ಸ್ಮಾರಕ ನಿಧಿ ಸಹಕಾರದಲ್ಲಿ ಆಯೋಜಿಸಲಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

Share This Article
error: Content is protected !!
";