ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರಿಗೆ ಅಭಿನಂದನೆಗಳ ಸುರಿಮಳೆ ಆಗುತ್ತಿದೆ.
ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಜಯಚಂದ್ರ ಅವರನ್ನು ಅನೇಕ ಗಣ್ಯರು, ಅಧಿಕಾರಿ ವರ್ಗದವರು, ಹಿತೈಷಿಗಳು, ಕಾರ್ಯಕರ್ತರು ಬೆಂಗಳೂರಿನ ಗೃಹ ಕಚೇರಿಯಲ್ಲಿ
ತಂಡೋಪ ತಂಡವಾಗಿ ಆಗಮಿಸಿ ಭೇಟಿ ಮಾಡಿ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡು ಅಭಿನಂದನೆ ಸಲ್ಲಿಸಿದ್ದಾರೆ.