ಲೇಖಕಿ ಬಾನು ಮುಷ್ತಾಕ್ ಅವರಿಗೆ ಗಣ್ಯರ ಅಭಿನಂದನೆಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ನಾಡಿನ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಸಿಎಂ ಮತ್ತಿತರ ಗಣ್ಯರು ಅಭಿನಂದನೆಗಳನ್ನು ತಿಳಿಸಿದ್ದಾರೆ.

- Advertisement - 

ಕುಮಾರಸ್ವಾಮಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ಸಮಸ್ತ ಕನ್ನಡಿಗರಿಗೆ ಇದು ಹೆಮ್ಮೆಯ ಕ್ಷಣ. ಜಾಗತಿಕ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ನಮ್ಮ ನಾಡಿನ ಹೆಮ್ಮೆಯ ಲೇಖಕಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

- Advertisement - 

ಹಾಗೆಯೇ; ಬೂಕರ್  ಪ್ರಶಸ್ತಿ ಪುರಸ್ಕೃತವಾಗಿರುವ ಅವರ ಹೃದಯ ದೀಪ ಕೃತಿಯನ್ನು ಇಂಗ್ಲೀಷ್ ಭಾಷೆಗೆ ಅನುವಾದಿಸಿರುವ ಲೇಖಕಿ ದೀಪಾ ಭಸ್ತಿ ಅವರಿಗೂ ಅಭಿನಂದನೆಗಳು.

ಬಾನು ಮುಷ್ತಾಕ್ ಅವರಿಂದ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಕೃತಿಗಳು ಬರಲಿ. ಅವರಿಂದ ಕನ್ನಡ ಸಾಹಿತ್ಯಲೋಕ ಮತ್ತಷ್ಟು ಶ್ರೀಮಂತವಾಗಲಿ ಹಾಗೂ ಜಗತ್ತಿನ ಉದ್ದಗಲಕ್ಕೂ ಕನ್ನಡದ ಕಂಪು ಹರಡಲಿ ಎಂದು ಹಾರೈಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement - 

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಸ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿಷ್ಟಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾನವಾಗಿರುವ ಖ್ಯಾತ ಸಾಹಿತಿ ಮತ್ತು ಪತ್ರಕರ್ತೆ ಬಾನುಮುಷ್ತಾಕ್ ಮತ್ತು ಅನುವಾದಕಿ ದೀಪಾ ಭಸ್ತಿ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದಿಸಿದೆ.

ಸಣ್ಣ ಕಥೆಗಳ ಅನುವಾದಿತ ಸಂಕಲನ ಹಾರ್ಟ್ ಲ್ಯಾಂಪ್’ (ಹೃದಯ ದೀಪ)ಕೃತಿ  ಅಂತಿಮ ಸುತ್ತಿಗೆ ಆಯ್ಕೆಯಾದ ಸಂದರ್ಭದಲ್ಲಿಯೇ ಹಾಸನದಲ್ಲಿ ಬಾನು ಮುಷ್ತಾಕ್ ಅವರನ್ನು ಅಭಿನಂದಿಸಿ ಶುಭ ಕೋರಿದ್ದನ್ನು ನೆನಪಿಸಿರುವ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಲಂಡನ್ ನಲ್ಲಿ ಬೂಕರ್ ಪ್ರಶಸ್ತಿ ಘೋಷಣೆ ಮಾಡಿದ ಕ್ಷಣ, ಕನ್ನಡಿಗರ ಪಾಲಿಗೆ ಹೆಮ್ಮೆಯ ಅಮೃತ ಘಳಿಗೆಯಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಬೂಕರ್ ವೇದಿಕೆಯಲ್ಲಿ ಕನ್ನಡದ ಸಾಹಿತ್ಯದ ಹಿರಿಮೆಯನ್ನು ಎತ್ತಿ ಹಿಡಿದ ಲೇಖಕಿ, ಪತ್ರಕರ್ತೆ, ಕತೆಗಾರ್ತಿ ಭಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಭೂಕರ್ ಪ್ರಶಸ್ತಿ ಲಭಿಸಿರುವುದು ಅವರ ಕತೆಗಳಲ್ಲಿ ಬೆಸೆದಿರುವ ಭಾರತೀಯತೆಯ ಬೆಸುಗೆಗೆ ಸಿಕ್ಕಿರುವ ಅಂತಾರಾಷ್ಟ್ರೀಯ ಮನ್ನಣೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನೂ ಅನೇಕ ಗಣ್ಯರು ಲೇಖಕಿ ಬಾನು ಮುಸ್ತಾಕ್ ಅವರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

 

Share This Article
error: Content is protected !!
";