ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಇಂದು

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯೋತ್ಸವ ಮತ್ತು ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತರುಗಳಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನ.19ರಂದು ಮದ್ಯಾಹ್ನ 12 ಗಂಟೆಗೆ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಉದ್ಘಾಟಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಅಭಿನಂದಿಸಲಿದ್ದಾರೆ.

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಪ್ರಸ್ತಾವಿಕವಾಗಿ ಮಾತನಾಡಲಿದ್ದು, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್ ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸನತ್ ಕುಮಾರ ಬೆಳಗಲಿ, ಎನ್.ಎಸ್.ಶಂಕರ್, ಎ.ಜಿ.ಕಾರಟಗಿ, ರಾಮಕೃಷ್ಣ ಬಡಶೇಷಿ, ಸುವರ್ಣ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಎಚ್.ಬಿ.ಮದನಗೌಡ, ಎಂ.ಸಿದ್ದರಾಜು, ಭಾರತಿ ಹೆಗಡೆ, ವಿಶ್ವನಾಥ್ ಸುವರ್ಣ,

ಆರ್.ಜಿ.ಹಳ್ಳಿ ನಾಗರಾಜು, ಮಂಜುನಾಥ ಅದ್ದೆ, ಮಲ್ಲಿಕಾರ್ಜುನ ಹೆಗ್ಗಳಿಗಿ, ರುದ್ರಪ್ಪ ಅಸಂಗಿ, ಶಾಂತಕುಮಾರಿ, ರಾಜು ಮಳವಳ್ಳಿ, ಪತ್ರಿಕಾ ವಿತರಕ ಲಕ್ಷ್ಮಿ ನರಸಪ್ಪ ಅವರನ್ನು ಅಭಿನಂದಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Share This Article
error: Content is protected !!
";