ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ವತಿಯಿಂದ 19.02.2025 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಕೆಯುಡಬ್ಲೂಜೆ ಸಭಾಂಗಣ, 3ನೇ ಮಹಡಿ, ಕಂದಾಯ ಭವನ, ಕೆ.ಜಿ.ರಸ್ತೆ, ಬೆಂಗಳೂರು ಇಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮಾಹಿತಿ ಆಯೋಗದ ಆಯುಕ್ತರುಗಳಾಗಿ ನೇಮಕಗೊಂಡಿರುವ ಹಿರಿಯ ಪತ್ರಕರ್ತರುಗಳಾದ ರುದ್ರಣ್ಣ ಹರ್ತಿಕೋಟೆ, ರಾಜಶೇಖರ್ ಎಸ್., ಬದ್ರುದ್ದೀನ್ ಕೆ., ಮತ್ತು ಡಾ.ಬಿ.ಆರ್ ಮಮತಾ ಅವರನ್ನು ಸಂಘದಿಂದ ಅಭಿನಂದಿಸಲಾಗುವುದು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿನಂದಿಸಿ ಮಾತನಾಡಲಿದ್ದಾರೆ.
ವಾರ್ತಾ ಇಲಾಖೆ ನಿವೃತ್ತ ಹಿರಿಯ ಜಂಟಿ ನಿರ್ದೇಶಕ ಎಚ್.ಬಿ.ದಿನೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಚಲನಚಿತ್ರ ಅಕಾಡೆಮಿಗೆ ನೇಮಕಗೊಂಡಿರುವ ಪತ್ರಕರ್ತರುಗಳಾದ ಚಿದಾನಂದ ಪಟೇಲ್, ಎಚ್.ದೇಶಾದ್ರಿ, ಸಾವಿತ್ರಿ ಮುಜುಮದಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ತಿಳಿಸಿದ್ದಾರೆ.

