ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಿಗೆ ಅಭಿನಂದನಾ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಯುವ ಚಿಲುಮೆ
24 ಸಾಂಸ್ಕೃತಿಕ ಚಟುವಟಿಕೆಗಳು ಯಶಸ್ವಿಯಾದ ಹಿನ್ನಲೆಯಲ್ಲಿ ಅದರ ನೇತೃತ್ವ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನೀತಾ ರವರನ್ನು ತಾಲ್ಲೂಕಿನ ಎಲ್ಲಾ ಪ್ರಾಂಶುಪಾಲರು ಸನ್ಮಾನಿಸಿ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸುನೀತಾ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರ ಸಹಕಾರದಿಂದ ಸಾಂಸ್ಕೃತಿಕ ಹಬ್ಬ ಯಶಸ್ವಿಯಾಗಲು ಸಾಧ್ಯವಾಯಿತು. ಜೊತೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಈ ಯುವ ಚಿಲುಮೆ
24 ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರಿಂದ ಕಾರ್ಯಕ್ರಮ ನಮ್ಮ ಕಾರ್ಯಕ್ರಮ ಯಶಸ್ವಿಯಾಯಿತು ಎಂದು ಹೇಳಿದರು.

 ಈ ಸನ್ಮಾನ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಾದ ಎನ್ ಆನಂದಮೂರ್ತಿ, ಮಹಾಂತೇಶ್, ರಂಗನಾಥ್ ಎಂ ಸಿ, ಮಂಜುನಾಥ್ ಬಿ ಆರ್, ವೇಣುಗೋಪಾಲ್, ಉಪೇಂದ್ರ,  ರೇಷ್ಮಾ, ಶಿವಶಂಕರ್ ಮತ್ತು ಉಪನ್ಯಾಸಕರಾದ ಮುನಿರಾಜು ಟಿ.ಆರ್, ರಾಮೇಗೌಡ, ಮಂಗಳಗೌರಿ,  ರವಿಕುಮಾರ್ ಭಾಗವಹಿಸಿದ್ದರು.

- Advertisement -  - Advertisement -  - Advertisement - 
Share This Article
error: Content is protected !!
";