ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದಲ್ಲಿ ತಾಲ್ಲೂಕಿನ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ತಿಳಿಸಿದರು.

   ಪ್ರತಿಭಟನೆಗೆ ಹೊರಡುವ ಮುನ್ನ ನಗರದ ಪ್ರವಾಸಿ ಮಂದಿರ ಮುಂಭಾಗ ಮಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ರಾಜ್ಯ ಸುಳ್ಳುಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸ  ಮಾಡುತ್ತಿದೆ ಕೆಲವು ಅನಿವಾರ್ಯತೆಗಳಿಂದಾಗಿ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿರುವುದನ್ನು ಬೃಹದಾಕಾರವಾಗಿ ಬಿಂಬಿಸಿ ಯಾತ್ರೆ ಹೆಸರಿನಲ್ಲಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದರು.

ಇಂದು ನಮ್ಮ ತಾಲ್ಲೂಕಿನಿಂದ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವ ಸಲುವಾಗಿ ಸಾವಿರಾರು ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು, ಸಾರ್ವಜನಿಕರು ತೆರಳುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತ ಸಹಿಸಲಾಗದ ಬಿಜೆಪಿ ಉನ್ನಾರಕ್ಕೆ ತಕ್ಕ ಉತ್ತರ ನೀಡಲಿದ್ದೇವೆ ಎಂದರು.

ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯ ಪ್ರಾಧಿಕಾರದ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ರಂಗಪ್ಪ ಮಾತನಾಡಿ ಈ ಹೋರಾಟವು ಕೇವಲ ಪಕ್ಷದ ಹೋರಾಟವಾಗಿ ಉಳಿಯದೆ ರಾಜ್ಯದ ಜನತೆ ಪಾಲ್ಗೊಳ್ಳುವ ಮೂಲಕ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸರ್ಕಾರ  ಜನಪರವಾಗಿದೆ ಎಂಬುದನ್ನು ಸಾಕ್ಷಿಯಾಗಿಸಿ ಬಿಜೆಪಿಪಕ್ಷದ ಸುಳ್ಳು ಆರೋಪಗಳಿಗೆ ಉತ್ತರವನ್ನು ಪ್ರತಿಭಟನೆಮೂಲಕ ನೀಡಲಾಗುವುದು ಎಂದರು.

ರೇವತಿ ಅನಂತ ರಾಮ್ ಮಾತನಾಡಿ ಇಂದಿನ ಹೋರಾಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಮಹಿಳಾ ಶಕ್ತಿ ಹರಿದು ಬರುತ್ತಿದ್ದು, ಬಿಜೆಪಿ ಸುಳ್ಳು ಆರೋಪಗಳನ್ನು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಪ್ರತಿಭಟನೆ ಮಾಡಲಿದ್ದೇವೆ, ರಾಜ್ಯ ಬಿಜೆಪಿಗೆ ಇದೊಂದು ಪಾಠವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಘಾಟಿ ದೇವಾಲಯದ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ  ಲಕ್ಷ್ಮ ನಾಯಕ್  ತಾ,ಕೃಷಿ ಸಮಾಜದ ಅಧ್ಯಕ್ಷ ಮುರಳಿಧರ್  ತೂಬಗೆರೆ ಬ್ಲಾಕ್ ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ  ಕಾಂತಮ್ಮ   ಪಿ. ಎಲ್. ಡಿ ಬ್ಯಾಂಕ್ ನಿರ್ದೇ ಶಕಿ ಶೋಭಾ ದೊಡ್ಡ ತಿಮ್ಮನ ಹಳ್ಳಿ ಅಶ್ವತ್ಥಪ್ಪ ಚಿಕ್ಕ ಮುದ್ದೇನಹಳ್ಳಿ ನಾರಾಯಣಪ್ಪ, ಹಾಡೋನಹಳ್ಳಿ ಸವಿತಾ ಹಾಗು ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಹೋರಾಟದಲ್ಲಿ ಭಾಗಿಯಾಗಿದ್ದರು.

 

 

Share This Article
error: Content is protected !!
";