ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಡೆಗೂ ದ್ವೇಷ ಭಾಷಣದ ವಿರುದ್ದ ದನಿ ಎತ್ತುವ ಧೈರ್ಯ ತೋರುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳು. ಸಚಿವ ದಿನೇಶ್ ಗುಂಡೂರಾವ್ ಅವರೇ, ಮೊದಲು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಬಹಿರಂಗ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ವಿಷ ಸರ್ಪ ಎಂದಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಕ್ರಮ ತೊಗೊಳ್ಳಿ. ಖರ್ಗೆ ಕುಟುಂಬದವರು ಮನಸ್ಸು ಮಾಡಿದರೆ ಬಿಜೆಪಿ ಕಾರ್ಯಕರ್ತರು ಕಲಬುರ್ಗಿ ಜಿಲ್ಲೆಗೆ ಕಾಲು ಇಡುವುದಕ್ಕೂ ಬಿಡುವುದಿಲ್ಲ ಅಂದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.
ಇನ್ನೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿ ಶಾಸಕ ಸಿ.ಟಿ.ರವಿ ಅವರನ್ನ ಬಿಟ್ಟಿದ್ದೇ ಪುಣ್ಯ ಎಂದಿದ್ದ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮೇಲೆ ಕ್ರಮ ಕೈಗೊಳ್ಳಿ.
ಯುವಕರು ಮೋದಿ ಮೋದಿ ಅಂದರೆ ಕಪಾಳಕ್ಕೆ ಹೊಡೆಯಬೇಕು ಎಂದಿದ್ದ ಸಚಿವ ಶಿವರಾಜ್ ತಂಗಡಗಿ ಅವರ ಮೇಲೆ ಕ್ರಮ ಕೈಗೊಳ್ಳಿ. ನೀವು ರೂಪಿಸುವ ಕಠಿಣ ಕಾನೂನಿನ ಅಡಿಯಲ್ಲಿ ಮೊದಲ FIR ಇವರುಗಳ ಮೇಲೆ ಆಗಿರಬೇಕು ಎಂದು ವಿಪಕ್ಷ ನಾಯಕ ಅಶೋಕ್ ತಾಕೀತು ಮಾಡಿದ್ದಾರೆ.