ಚಂದ್ರವಳ್ಳಿ ನ್ಯೂಸ್, ಸೊಂಡೂರು:
ಸಂಸದರಾದ ಈ. ತುಕಾರಾಮ್, ಮಾಜಿ ಸಚಿವರಾದ ಅಲ್ಲo ವೀರಭದ್ರಪ್ಪ ಅವರ ಸಮ್ಮುಖದಲ್ಲಿ ಸಂಡೂರು ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರು ನಾಮಪತ್ರ ಸಲ್ಲಿಸಿದರು.
ಮೆರವಣಿಗೆ: ಸಂಡೂರು ವಿಧಾನ ಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಬೃಹತ್ ಮೆರವಣಿಗೆಯಲ್ಲಿ
ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್, ಸಚಿವರಾದ ಸಂತೋಷ್ ಲಾಡ್, ಸಂಸದ ತುಕಾರಾಂ, ಮಾಜಿ ಸಚಿವ ಬಿ.ನಾಗೇಂದ್ರ, ಪಿ.ಟಿ ಪರಮೇಶ್ವರ ನಾಯ್ಕ್, ಅಲ್ಲಂ ವೀರಭದ್ರಪ್ಪ, ಶಾಸಕರಾದ ಡಾ.ಎನ್.ಟಿ ಶ್ರೀನಿವಾಸ್, ಬಿ.ಎಂ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.