ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಿಎಂ ಇ-ಡ್ರೈವ್ ಯೋಜನೆಯಡಿ ಹೈದರಾಬಾದ್‌ಗೆ 2,000 ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದ್ದಕ್ಕಾಗಿ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ತೆಲಂಗಾಣ ಸಿಎಂ ರೇವಂತ್ ಅವರು ಕೃತಜ್ಞತೆ ಸಲ್ಲಿಸಿದರು.
ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಹಸಿರು, ಸ್ವಚ್ಛ ಭಾರತವನ್ನು ನಿರ್ಮಿಸಲು ಕೇಂದ್ರ ಸಚಿವರು ಬದ್ಧರಾಗಿದ್ದಾರೆ ತಿಳಿಸಿದರು.