ಗಂಧದಗುಡಿಯನ್ನು ಕಸಾಯಿಖಾನೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಂಧದಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀನ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟಿರುವ ವಿಷಯ ಅತ್ಯಂತ ಆಘಾತಕಾರಿ. ವನ್ಯಜೀವಿ ಸಂರಕ್ಷಣಾ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ತನ್ನದೇ ಆದ ಹೆಸರು ಮಾಡಿರುವ ಕರ್ನಾಟಕದಲ್ಲಿ ಇಂತಹ ಘಟನೆ ನಡೆದಿರುವುದು ರಾಜ್ಯಕ್ಕೆ ಕಳಂಕ ತಂದಿದೆ.

- Advertisement - 

ಮಲೈ ಮಹದೇಶ್ವರ ಕಾಡು ಹುಲಿ ಸಂತತಿ ಹೆಚ್ಚಳಕ್ಕೆ ಬೇಕಾದ ಎಲ್ಲಾ ಅಗತ್ಯ ವಾತಾವರಣವನ್ನು ಹೊಂದಿದೆ. ಆದರೆ ಅರಣ್ಯ ಇಲಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ಭ್ರಷ್ಟಾಚಾರ ನಮ್ಮ ವನ್ಯ ಸಂಪತ್ತನ್ನು ಹಾಳು ಮಾಡುತ್ತಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ, ಸರ್ಕಾರ ಅರಣ್ಯ ಇಲಾಖೆಯಲ್ಲಿ ಆಡಳಿತ ಬಿಗಿಗೊಳಿಸದಿದ್ದರೆ ಇಡೀ ಅರಣ್ಯವೇ ಸರ್ವನಾಶ ಆಗುವ ಅಪಾಯವಿದೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರಿಗೆ ಮುಲಾಜಿಲ್ಲದೆ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

- Advertisement - 

 

Share This Article
error: Content is protected !!
";