ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನ ಪೀಡಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಜನರಿಗೆ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ಕೊಡುತ್ತಲೇ ಇದೆ ಎಂದು ಜೆಡಿಎಸ್ ಕಿಡಿಕಾರಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ತೆರಿಗೆ ಹೆಚ್ಚಳದ ಬರೆ ಎಳೆಯುತ್ತ ಸಾರ್ವಜನಿಕರ ರಕ್ತ ಹೀರುತ್ತಿರುವ ಸಿದ್ದರಾಮಯ್ಯ ಸರ್ಕಾರ, ಈಗ “ಒಸಿ ಇಲ್ಲದೇ ವಿದ್ಯುತ್ ಸಂಪರ್ಕವಿಲ್ಲ” ಎಂದು ಮನೆ ಕಟ್ಟುವವರ ಮೇಲೆ ಗಧಾ ಪ್ರಹಾರ ಮಾಡುತ್ತಿದೆ ಎಂದು ಜೆಡಿಎಸ್ ದೂರಿದೆ.