ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಅಧಿಕಾರ ಹಿಡಿದ ಕರ್ನಾಟಕ ಕಾಂಗ್ರೆಸ್ ಇದೀಗ ರಾಜ್ಯದ ಜನರನ್ನು ಕಾಲ ಕಸದಂತೆ ನಡೆಸಿಕೊಳ್ಳುತ್ತಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಐದಾರು ತಿಂಗಳಿಂದ ಫಲಾನುಭವಿಗಳ ಖಾತೆಗೆ ಸರಿಯಾಗಿ ಹಣ ಪಾವತಿ ಮಾಡದೇ ಮೋಸ ಮಾಡುತ್ತಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಹಣ ಹಾಕೋದಕ್ಕೆ ಅದೇನು ತಿಂಗಳ ಸಂಬಳನಾ ? ಹಾಕುತ್ತಾರೆ ಬಿಡಿ ಎಂದು ಸೊಕ್ಕಿನ ಮಾತಾಡಿರುವ ಸಚಿವ ಜಾರ್ಜ್ ಅವರಿಗೆ ನಾಚಿಕೆಯಾಗಬೇಕು ಎಂದು ಜೆಡಿಎಸ್ ಟೀಕಿಸಿದೆ.
ಕಾಂಗ್ರೆಸ್‌ಗೆ ವೋಟು ಕೊಡಿ, ಐದು ಗ್ಯಾರಂಟಿ ಕೊಡ್ತೀವಿ ಎಂದು ಹುಸಿ ಭರವಸೆ ನೀಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್, ಈಗ ನಾಡಿನ ಮತದಾರರನ್ನು ತುಚ್ಛವಾಗಿ ಕಾಣುತ್ತಿರುವುದು ಖಂಡನೀಯ. ನಿಮ್ಮ ದರ್ಪ, ದುರಂಹಕಾರದ ಮಾತುಗಳಿಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಜೆಡಿಎಸ್ ಎಚ್ಚರಿಸಿದೆ.