ಮತ್ತೆ ಹಾಲಿನ ದರ ಹೆಚ್ಚಳಕ್ಕೆ ಮುಂದಾದ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಲವು ತಿಂಗಳ ಹಿಂದೆ ಪ್ರತಿ ಹಾಲಿನ ಪ್ಯಾಕೆಟ್‌ದರ
2 ರೂಪಾಯಿ ಏರಿಕೆ ಮಾಡಿ ಗ್ರಾಹಕರ ಜೇಬಿನಿಂದ ಕಸಿದುಕೊಂಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯಪಾಲರ ಭಾಷಣದಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿದೆ ಎಂದು ಹೇಳಿಸಿದ ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಆರು ತಿಂಗಳಿನಿಂದ ರೂ.
656.07 ಕೋಟಿ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದೆ. ರೈತರ ಹೆಸರು ಹೇಳಿಕೊಂಡು ಹಾಲಿನ ದರ ಏರಿಕೆ ಮಾಡುವ ಸಿಎಂ ಸಿದ್ದರಾಮಯ್ಯ ಅವರೇ ಮೊದಲು ರೈತರಿಗೆ ನೀಡಬೇಕಾದ ಪ್ರೋತ್ಸಾಹಧನ ನೀಡಿ ಎಂದು ಬಿಜೆಪಿ ಆಗ್ರಹ ಮಾಡಿದೆ.

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಿ, ಬಾಕಿ ಪ್ರೋತ್ಸಾಹಧನ ಹಣವನ್ನು ಸರಿಯಾಗಿ ನೀಡದ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಇದೀಗ ರೈತರಿಗಾಗಿ ಹಾಲಿನ ದರ ಹೆಚ್ಚಿಸುವುದಾಗಿ ಹೇಳಿ ಕನ್ನಡಿಗರ ಕಿವಿ ಮೇಲೆ ಹೂವು ಇಡಲು ಮುಂದಾಗಿದೆ. ಹಾಲಿನ ದರ ಲೀಟರ್‌ಗೆ 10 ರೂ. ಹೆಚ್ಚಳ ಮಾಡುವಂತೆ ರೈತರು ಒತ್ತಾಯ ಮಾಡಿದ್ದಾರೆ ಎಂದು ಕುಂಟು ನೆಪ ಹೇಳಿ ಹೆಚ್ಚಳಕ್ಕೆ ಮುಂದಾಗಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement - 

ನಂದಿನಿ ಉಳಿಸಿ ಎನ್ನುತ್ತಾ ರಾಜಕೀಯ ಮಾಡಿ ಅಧಿಕಾರ ಹಿಡಿದ ಕಾಂಗ್ರೆಸ್‌, ಇದೀಗ ಕನ್ನಡಿಗರ ಬದುಕನ್ನೇ ಬರ್ಬಾದ್ ಮಾಡಿದೆ. ಕರುನಾಡಿನ ಜನತೆಯನ್ನು ಬೆಲೆ ಏರಿಕೆಯ ಬಿಸಿಯಿಂದ ಉಳಿಸಬೇಕಿದೆ! ಎಂದು ಬಿಜೆಪಿ ತಿಳಿಸಿದೆ.

 

- Advertisement - 

Share This Article
error: Content is protected !!
";