ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಕರ್ನಾಟಕ ಕಾಂಗ್ರೆಸ್ ಪಕ್ಷ, ಈಗ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ.
ಕೊರೊನಾ ವೈರಸ್ ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ ನಿಂದ ಮುಕ್ತವಾಗಬೇಕಿದೆ ಎಂದು ಅಶೋಕ್ ತಿಳಿಸಿದ್ದಾರೆ.