ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ಗೆಲ್ಲಲಾಗದ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಈಗ ವಾಮಮಾರ್ಗದ ಮೂಲಕ ಜಯಗಳಿಸುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆಯೇ ಇದಕ್ಕೆ ಸಾಕ್ಷಿ. ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಂಸಿಡಿಸಿಸಿ) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್, ಅಕ್ರಮವಾಗಿ ಚುನಾವಣೆ ಗೆದ್ದಿರುವುದನ್ನು ಸಹಕಾರಿ ಸಚಿವ ರಾಜಣ್ಣ ಒಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ದೂರಿದೆ.
ಚನ್ನಪಟ್ಟಣ ತಾಲ್ಲೂಕಿನಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೂಪರ್ ಸೀಡ್ ಮಾಡಿ, ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ವೇಳೆ ಕಾಂಗ್ರೆಸ್ ಜಯಗಳಿಸಿತ್ತು ಎಂದು ಜೆಡಿಎಸ್ ಆರೋಪಿಸಿದೆ.