ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಅಭಿವೃದ್ಧಿ ವಿಚಾರದಲ್ಲಿಯೂ ದ್ವೇಷ ರಾಜಕಾರಣ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಾಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೆ ತಾರತಮ್ಯ ಮುಂದುವರಿಸಿದೆ ಎಂದು ಜೆಡಿಎಸ್ ಆರೋಪಿಸಿದೆ.
ಸಿದ್ದರಾಮಯ್ಯ ಸರ್ಕಾರದ ಈ ಅಸಂವಿಧಾನಿಕ ನಡೆ ವಿರುದ್ಧ ಶ್ರೀನಿವಾಸಪುರ ಕ್ಷೇತ್ರದ ಶಾಸಕ ವೆಂಕಟಶಿವಾರೆಡ್ಡಿ ಅವರು, ಅನುದಾನ ತಾರತಮ್ಯ ಪ್ರಶ್ನಿಸಿ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ಗೆ ರಿಟ್‌ಅರ್ಜಿ ಸಲ್ಲಿಸಿದ್ದಾರೆ.
ಆಡಳಿತ ಪಕ್ಷದ ಕಾಂಗ್ರೆಸ್‌ಶಾಸಕರಿಗೆ 50 ಕೋಟಿ ರೂ. ಹೆಚ್ಚಿನ ಅನುದಾನ ನೀಡಿ, ವಿರೋಧ ಪಕ್ಷಗಳ ಶಾಸಕರಿಗೆ ಸಮರ್ಪಕ ಅನುದಾನ ನೀಡದೇ ಪ್ರತಿಯೊಂದು ವಿಚಾರದಲ್ಲಿಯೂ ಅನ್ಯಾಯ ಮಾಡುತ್ತಿದ್ದು, ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಜೆಡಿಎಸ್ ಆರೋಪಿಸಿದೆ.

