ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಂಚ ಗ್ಯಾರಂಟಿಳಿಗೆ ಆಯಸ್ಸು ಕಡಿಮೆಯಾಗಿದೆ. ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರೇ ಗ್ಯಾರಂಟಿಯಿಂದ ಹೊರೆಯಾಗುತ್ತಿರುವುದು ನಿಜ ಎಂದು ಒಪ್ಪಿಕೊಂಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈಗಾಗಲೇ ಪರಿಷ್ಕರಣೆ ನೆಪದಲ್ಲಿ ಲಕ್ಷಾಂತರ ಬಿಪಿಎಲ್‌ಕಾರ್ಡ್‌ರದ್ದುಪಡಿಸಿ ಬಡವರ ತುತ್ತು ಅನ್ನಕ್ಕೆ ಕಲ್ಲುಹಾಕಲಾಗಿದೆ ಎಂದು ನಿಖಿಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಮತ್ತೊಂದುಕಡೆ ಗ್ಯಾರಂಟಿಗಳಿಗೆ ಮುಂದುವರೆಯುವ ಗ್ಯಾರಂಟಿ ಇಲ್ಲ. ಮೂರು ನಾಲ್ಕು ತಿಂಗಳಿಗೊಮ್ಮೆ ಹಣ ಜಮಾ ಮಾಡೋ ಗೃಹಲಕ್ಷ್ಮಿ ಮತ್ತು ಯುವನಿಧಿ ಫಲಾನುಭವಿಗಳಿಗೆ ಸಹಾಯ ಮಾಡ್ತಿಲ್ಲ ಎಂದು ಅವರು ದೂರಿದ್ದಾರೆ.
ಸಿಎಂ ಸಿದ್ದರಾಮಯ್ಯನವರು ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಜಮಾ ದಿನಾಂಕ ತಿಳಿಸಬೇಕೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು, ಪ್ರತೀ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು ಆದರೆ ಐದಾರು ತಿಂಗಳಾದರೂ ಫಲಾನುಭವಿಗಳಿಗೆ ಹಣ ಹಾಕುತ್ತಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರು ಆಗಿರುವ ಸಿದ್ದರಾಮಯ್ಯ ನವರು ₹4 ಲಕ್ಷ ಕೋಟಿ ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ಆದರೆ ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ ಮಾತ್ರ “ಮ್ಯಾಜಿಕ್” ಆಗಿ ಹಣ ಜಮಾವಾಗುತ್ತದೆ! ಎಂದು ಅವರು ಟೀಕಿಸಿದ್ದಾರೆ.
ಪ್ರತಿ ಬಾರಿಯೂ ತಾಂತ್ರಿಕ ಸಮಸ್ಯೆಯ ನೆಪ ಒಡ್ಡುವುದು ನಿಜಕ್ಕೂ ಹಾಸ್ಯಾಸ್ಪದವಾಗಿದೆ. ಬೆಂಗಳೂರು, ಭಾರತದ ಸಿಲಿಕಾನ್ ಕ್ಯಾಪಿಟಲ್, ಜಾಗತಿಕ ತಂತ್ರಜ್ಞಾನ ಕೇಂದ್ರದಲ್ಲಿ DBT ವರ್ಗಾವಣೆ ಸರಿಪಡಿಸಲಾಗುವುದಿಲ್ಲವೇ? ಎಂದು ನಿಖಿಲ್ ಕುಮಾರಸ್ವಾಮಿ ಖಾರವಾಗಿ ಪ್ರಶ್ನಿಸಿದ್ದಾರೆ.
ಮುಂಬರುವ ಬಜೆಟ್ ಅಧಿವೇಶನದಲ್ಲಿ ಗ್ಯಾರಂಟಿ ಕ್ಯಾಲೆಂಡರ್ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕವನ್ನು ನಿಗದಿ ಮಾಡಿ, ಸಮಯಕ್ಕೆ ಸರಿಯಾಗಿ DBT ವರ್ಗಾವಣೆ ಖಚಿತಪಡಿಸಬೇಕೆಂದು ನಿಖಿಲ್ ಒತ್ತಾಯಿಸಿ ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ! ಎಂದು ತಾಕೀತು ಮಾಡಿದ್ದಾರೆ.