ಹಾಲು ಉತ್ಪಾದಕ ರೈತರಿಗೆ ಶಾಪವಾದ ಕಾಂಗ್ರೆಸ್‌ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನ್ನಕೊಡುವ ರೈತರಿಗೆ ರಾಜ್ಯ ಕಾಂಗ್ರೆಸ್‌ಸರ್ಕಾರ ಶಾಪವಾಗಿ ಪರಿಣಮಿಸಿದೆ. ವಚನ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಕಳೆದ 9 ತಿಂಗಳಿಂದ ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡದೆ ಅವರ ಅನ್ನಕ್ಕೂ ಕಲ್ಲುಹಾಕಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

ಲಕ್ಷಾಂತರ ಬಡ ರೈತ ಕುಟುಂಬಗಳು ಜೀವನೋಪಾಯಕ್ಕಾಗಿ ಹೈನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಆದರೆ ಖಜಾನೆಯನ್ನು ಖಾಲಿ ಮಾಡಿರುವ ಭಂಡ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಹಣಕಾಸಿನ ಕೊರತೆ‌ನೆಪವೊಡ್ಡಿ 9 ತಿಂಗಳಿಂದ ರೈತರಿಗೆ ಬಿಡಿಗಾಸು ನೀಡಿಲ್ಲ ಎಂದು ಜೆಡಿಎಸ್ ಕಿಡಿಕಾರಿದೆ.

ರಾಜ್ಯದಲ್ಲಿ ಲಜ್ಜೆಗೆಟ್ಟ ಆಡಳಿತ ನಡೆಸುತ್ತಿರುವ ಸರ್ಕಾರ, ತಕ್ಷಣವೇ ಆರ್ಥಿಕ ಸಮಸ್ಯೆಯಿಂದ ನರುಳುತ್ತಿರುವ ಬಡ ರೈತರ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಜೆಡಿಎಸ್ ತಾಕೀತು ಮಾಡಿದೆ.

 

 

- Advertisement -  - Advertisement - 
Share This Article
error: Content is protected !!
";